ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ಇಂಗ್ಲೆಂಡ್‌ನ ಲೀಸೆಸ್ಟರ್‌ಶೈರ್‌ನಲ್ಲಿ ಕಾರು ರಸ್ತೆ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿ ಚಿರಂಜೀವಿ (32) ಎಂಬುವವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಲೀಸೆಸ್ಟರ್‌ಶೈರ್ ಪೊಲೀಸರ ಪ್ರಕಾರ, ಚಿರಂಜೀವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಓರ್ವ ಮಹಿಳೆ ಮತ್ತು ಇಬ್ಬರು ಪುರುಷರು ಸೇರಿದಂತೆ ಮೂವರು ಪ್ರಯಾಣಿಕರು ಮತ್ತು ಚಾಲಕನಿಗೆ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಬ್ಬರು ಪುರುಷ ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.