ಚಂದ್ರದ್ರೋಣ ಪರ್ವತದಲ್ಲಿ ಭೀಕರ ಅನಾಹುತ: 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಬೆಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ಬಸ್ 100 ಅಡಿ ಎತ್ತರದ ಕಂದಕಕ್ಕೆ ಉರುಳಿ ಬಿದ್ದಿದೆ.

23 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಮಾಣಿಕ್ಯಧಾರ, ದತ್ತಪೀಠ, ಮುಳ್ಳಯ್ಯನಗರಿಗೆ ಬಂದಿದ್ದರು. ಇದೇ ವೇಳೆ ದತ್ತಪೀಠ-ಮಾಣಿಕ್ಯಧಾರ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!