ಮುಂಬೈನ ಗೊರೆಗಾಂವ್‌ನಲ್ಲಿ ಭೀಕರ ಅಗ್ನಿ ಅವಘಡ: ಆರು ಮಂದಿ ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ಗೊರೆಗಾಂವ್‌ನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ಸಉಟ್ಟು ಭಸ್ಮವಾಗಿದ್ದಾರೆ.

ಅಗ್ನಿ ಅವಘಡದಲ್ಲಿ 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ವಾಹನಗಳು ಸುಟ್ಟು ಕರಕಲಾಗಿವೆ. ಬೆಳಗಿನ ಜಾವ ಮೂರು ಗಂಟೆಗೆ ಬೆಂಕಿ ಹೊತ್ತಿದ್ದರಿಂದ ಕಟ್ಟಡದಲ್ಲಿ ಇದ್ದವರು ನಿದ್ದೆಯಲ್ಲಿದ್ದರು, ಹೀಗಾಗಿ ಕಟ್ಟಡದಿಂದ ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್‌ನಲ್ಲಿ ಬೆಂಕಿ ಕಾಣಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಾರ್ಕಿಂಗ್‌ನಲ್ಲಿ ಅಂಗಡಿಗಳಿದ್ದು, ಅಂಗಡಿಯಲ್ಲಿದ್ದವರು ಮೃತಪಟ್ಟಿದ್ದಾರೆ ಓರ್ವ ಪುರು, ಮೂವರು ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ಮೃತಪಟ್ಟಿದ್ದು, ಗುರುತು ಸಿಕ್ಕಿಲ್ಲ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!