ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಬಾಲಕನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.
ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿದ ಪರಿಣಾಮ 8 ವರ್ಷದ ಬಾಲಕ ಭವಿಷ್ ಎಂಬಾತ ಹೊಲದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದು, ಆತನ ದೇಹ ಛಿದ್ರವಾಗಿದೆ.
ತಾಯಿ ಮಮತಾ ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಆ ವೇಳೆ ಭವಿಷ್ ಹಾಗೂ ಅವರ ಸೋದರ ಮಾವ ಟ್ರ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳುತ್ತಿದ್ದರು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‌ನಿಂದ ಬಿದ್ದ ಭವಿಷ್ ರೊಟಾವೆಲ್ಟರ್‌ಗೆ ಸಿಲುಕಿ ಈ ಅವಘಡ ಸಂಭವಿಸಿದೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.