ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಿನ್ನೆ ರಾತ್ರಿ ಅಪಘಾತ ನಡೆದಿದೆ.
ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಮತ್ತು ತಂಗಮ್ಮ(55) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನು ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.