ಹೊಸದಿಗಂತ ವರದಿ,ಕಲಬುರಗಿ:
ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಭೀಕರವಾದ ಅಫಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಜನರು ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು.
ದುಧನಿಯಿಂಧ ಅಫಜಲಪುರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅವಘಡ ಸಂಭವಿಸಿದೆ ಮೃತಪಟ್ಟ ದುರ್ದೈವಿಗಳೆಲ್ಲರೂ, ಅಫಜಲಪುರಿನ ಫಾಸ್ಟ್ ಫುಡ್ ಮಾರಾಟ ಮಾಡುವ ಹೋಟೆಲ್ ನಡೆಸುತ್ತಿದ್ದರು.
ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರಿನ ತಾಲೂಕಿನಲ್ಲಿ ವಾಸವಿದ್ದು, ಘಟನಾ ಸ್ಥಳಕ್ಕೆ ಅಫಜಲಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.