ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಜನರು ಅಸುನೀಗಿದ ಘಟನೆ ನಡೆದಿದೆ.

ಒಂದೇ ಕುಟುಂಬದ ಮೂವರು ಸದಸ್ಯರು ದಾರುಣ ಅಂತ್ಯ ಕಂಡಿದ್ದಾರೆ.

ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಕುಟುಂಬ ಹೊರಟಿತ್ತು. ಓವರ್​ಟೇಕ್ ಮಾಡುವ ಭರದಲ್ಲಿ ಯಮವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ. ಕಾರು ಚಲಾಯಿಸುತ್ತಿದ್ದ ವೆಂಕಟೇಶ್​, ಕಾರಿನಲ್ಲಿದ್ದ ಶ್ರೀಕಾಂತ್​ ರೆಡ್ಡಿ ಅವರ ಪತ್ನಿ ಚೈತ್ರಾ ನಾಲ್ಕು ವರ್ಷದ ಮಗು ಶ್ರೀಹಾನ್ ಅಸುನೀಗಿದ ದುರ್ದೈವಿಗಳು ಎಂದು ಹೇಳಲಾಗಿದೆ.

ಇನ್ನು ಶ್ರೀಕಾಂತ್​ ರೆಡ್ಡಿಯವರ ಎರಡು ಕಾಲೆಗೆ ಭೀಕರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!