ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಬೈಕ್‌ಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಸವಾರನ ಪತ್ನಿಗೆ ಎರಡು ಕಾಲು ಕಟ್ ಆಗಿವೆ. ಸಣ್ಣ ಪುಟ್ಟ ಗಾಯಗಳಿಂದ ಮಗು ಪ್ರಾಣಪಾಯದಿಂದ ಪಾರಾಗಿದ್ದಾರೆ.
ದಂಪತಿ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದಿದ್ದಾರೆ.
ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.