ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ.
ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು ಸಮೀಪ ಬಳಿ ಅಪಘಾತ ಸಂಭವಿಸಿದ್ದು, ಲಾರಿಯನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ದೇಹಗಳು ಛಿದ್ರ ಛಿದ್ರವಾಗಿವೆ.6 ವರ್ಷದ ಪುತ್ರಿಯ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.