ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಟಾವಾ ಜಿಲ್ಲೆಯ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಕಾನ್ಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮೃತರ ಗುರುತು ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ ಕಾರಿನಲ್ಲಿ 6 ಮಂದಿ ಇದ್ದರು. ಇದರಲ್ಲಿ ಮಗುವೂ ಸೇರಿದೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.