ಭೀಕರ ರಸ್ತೆ ಅಪಘಾತ: ಅಪರಿಚಿತ ವಾಹನ ಡಿಕ್ಕಿಯಾಗಿ ಆರು ಮಂದಿ ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ ಈ ಅವಘಡ ಸಂಭವಿಸಿದೆ. ಆಮರುತಿ ಇಕೋ ವಾಹನದಲ್ಲಿ ತೆರಳುತ್ತಿದ್ದ ಈ ನತದೃಷ್ಟರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ವಾಹನದಲ್ಲಿದ್ದವರು ಉತ್ತರ ಪ್ರದೇಶದ ದೇವಾಸ್ ನಿವಾಸಿಗಳಾಗಿದ್ದು, ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳುತ್ತಿದ್ದರು. ಈ ಬಗ್ಗೆ ಪ್ರತಿಕ್ರಯೆ ನೀಡಿರುವ ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ, ಕೃತ್ಯ ನಡೆಸಿದ ವಾಹನದ ಪತ್ತೆಗಾಗಿ ಕಾರ್ಯಾಚರಣೆ ಆರಂಭವಾಗಿದೆ ಎಂದು ಹೇಳಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!