ಶಾಲಾ ಪ್ರವಾಸಕ್ಕೆ ಹೋಗುತ್ತಿದ್ದ ಬಸ್‌ಗಳ ಭೀಕರ ಅಪಘಾತ: 15 ವಿದ್ಯಾರ್ಥಿಗಳು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಶಾಲಾ ಪ್ರವಾಸಕ್ಕೆಂದು ತೆರಳುತ್ತಿದ್ದ 2 ಬಸ್‌ಗಳು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಮಣಿಪುರದನೋನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ.
ಬಸ್‌ಗಳ ನಿಯಂತ್ರಣ ತಪ್ಪಿ ಭೀಕರ ಅಪಘಾತ ಉಂಟಾಗಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದಾಗಿವೆ. ಬಸ್‌ಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಸಾಗುತ್ತಿತ್ತು.
ಗಾಯಗೊಂಡ ವಿದ್ಯಾರ್ಥಿಗಳನ್ನು ಬಿಷ್ಣುಪುರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಇಂಫಾಲದ ರಾಜ್ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!