ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಮುನಾ ಎಕ್ಸ್ಪ್ರೆಸ್ವೇನಲ್ಲಿ 20ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.
ದೆಹಲಿ ಎನ್ಸಿಆರ್ನಲ್ಲಿ ಬುಧವಾರ ಬೆಳಗ್ಗೆ ದಟ್ಟ ಮಂಜು ಕವಿದ ಕಾರಣ ಕೆಲ ಸ್ಥಳಗಳಲ್ಲಿ ಶೂನ್ಯ ಗೋಚರವೂ ಇತ್ತು. ಇದರಿಂದಾಗಿ ಸರಣಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ. ದೆಹಲಿಯಲ್ಲಿ ಭಾರೀ ಚಳಿ ಹಾಗೂ ಮಂಜಿನಿಂದಾಗಿ ವಿಮಾನ ಹಾಗೂ ರೈಲು ಸಂಚಾರ ವಿಳಂಬವಾಗಿದೆ.