ಬಿಹಾರದಲ್ಲಿ ಭೀಕರ ಸರಣಿ ಅಪಘಾತ: ಒಂಬತ್ತು ಮಂದಿ ಮಸಣಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎನ್‌ಎಚ್೨ರ ದೇವಕಾಲಿ ಗ್ರಾಮದ ಬಳಿ ಸಸಾರಾಮ್‌ನಿಂದ ವಾರಣಾಸಿಗೆ ತೆರಳುತ್ತಿದ್ದ ಕಾರ್ ಬೈಕ್‌ಗೆ ಡಿಕ್ಕಿಯಾಗಿದೆ. ಕಾರ್ ಗುದ್ದಿದ ರಭಸಕ್ಕೆ ಬೈಕ್ ಪಕ್ಕದ ಲೇನ್‌ಗೆ ಹಾರಿ ಕಾರ್‌ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಕಾರ್ ಪಲ್ಟಿ ಹೊಡೆದು ಟ್ರಕ್‌ಗೆ ಡಿಕ್ಕಿಯಾಗಿದೆ.

ಸರಣಿ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು, ಕಾರ್ ಚಾಲಕ ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!