ದುಬೈನಲ್ಲಿ ಭೀಕರ ಅಪಘಾತ: ಬೆಳಗಾವಿಯ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದುಬೈನ ಓಮಾನ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು. ಕುಟುಂಬ ದುಬೈನ ಓಮಾನ್​ಗೆ ಪ್ರವಾಸಕ್ಕೆ ತೆರಳಿತ್ತು.

ಹೈಮಾ ಎಂಬ ಪ್ರದೇಶದಲ್ಲಿ ಕುಟುಂಬ ತೆರಳುತ್ತುದ್ದ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಅನುಕೂಲ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!