ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಹೊರವಲಯದ ಹೊಸಕೋಟೆ ಪಟ್ಟಣದ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ದಾಟುವ ಪಾದಚಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಓರ್ವ ಯುವತಿ ಸಾವನ್ನಪ್ಪಿದ್ದಾಳೆ.
ಪಾದಾಚಾರಿಗಳ ಮೇಲೆ ಹರಿದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಮತ್ತೊಬ್ಬ ಬೈಕ್ ಸವಾರ ಹಾಗೂ ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಹೊಸಕೋಟೆ ಕೋರ್ಟ್ ಸರ್ಕಲ್ ಬಳಿ ಸರಣಿ ಅಪಘಾತ ನಡೆದಿದೆ. ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಬನ್ನೇರುಘಟ್ಟ ಮೂಲದ ಯುವತಿ ಸುಧಾ (20) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕ್ಯಾಂಟರ್ ಪಾದಾಚಾರಿಗಳ ಮೇಲೆ ಹರಿದ ನಂತರ ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕೆಎಸ್ಆರ್ ಟಿಸಿ ಬಸ್ ಹಾಗೂ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಕ್ಯಾಂಟರ್ ಡಿಕ್ಕಿಗೆ ಮುಳಬಾಗಿಲಿನ ಬೈಕ್ ಸವಾರ ನಜೀರ್ ಖಾನ್‌ಗೆ (65) ಗಂಭೀರ ಗಾಯವಾಗಿದೆ. ಕ್ಯಾಂಟರ್ ಚಾಲಕ ಕೊಲ್ಕತ್ತಾ ಮೂಲದ ಷರೀಪ್ ಉಲ್ಲಾನಿಗೂ (30) ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.