March 23, 2026
Monday, March 23, 2026
spot_img

ಬೈಕ್‌ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಮಹಿಳೆ ಮೃತ್ಯು , ಸವಾರನ ಸ್ಥಿತಿ ಗಂಭೀರ

ಹೊಸದಿಗಂತ ವಿಜಯಪುರ:

ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತ ಮಹಿಳೆಯನ್ನು ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಎಂದು ಗುರುತಿಸಲಾಗಿದೆ. ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಾಳವ್ವ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ವಿರುದ್ಧ ತನಿಖೆ ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !