ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾನ್ಸ್‌ಟೇಬಲ್‌ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ.

ಪ್ರಕಾಶ್(38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್‌. ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here