ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ರಾಮನಗುಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಎದುರು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಏರ್ ಬ್ಯಾಗ್ ತೆರುದುಕೊಂಡ ಕಾರಣ ಅದೃಷ್ಟವಶಾತ್ ಕಾರಿನಲ್ಲಿದ್ದ
7 ಜನರು ಅಪಾಯದಿಂದ ಪಾರಾದ ಘಟನೆ ಶನಿವಾರ ಸಂಜೆ ನಡೆದಿದೆ.
ಬೆಳಗಾವಿ ಗೋಕಾಕ್ ನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದ ಪ್ರವಾಸಿಗರ ಕಾರಿಗೆ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದು 33 ಕೆ.ವಿ ಸ್ಟೇಷನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಗುದ್ದಿದೆ ಕಾರಿನ ಮುಂಬಾಗ ಸಂಪೂರ್ಣ ಜಜ್ಜಿ ಹೋಗಿದೆ.
ಕಾರಿನಲ್ಲಿ 3 ಪುರುಷರು,ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 7 ಜನ ಪ್ರಯಾಣಿಸುತ್ತಿದ್ದರು
ಏರ್ ಬ್ಯಾಗ್ ಸಮಯಕ್ಕೆ ಸರಿಯಾಗಿ ತೆರೆದುಕೊಳ್ಳದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎನ್ನಲಾಗುತ್ತಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ಕಾರಣ ರಸ್ತೆಯಲ್ಲಿ ಕೆಲವು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.