ಶಿವಮೊಗ್ಗದಲ್ಲಿ ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ: ಸ್ಥಳದಲ್ಲಿಯೇ‌ ಇಬ್ಬರ ದುರ್ಮರಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎರಡು‌ ಖಾಸಗಿ‌ ಬಸ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ‌ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಚೋರಡಿ ಸೇತುವೆ ಬಳಿ ಗುರುವಾರ ನಡೆದಿದೆ.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾಳಪ್ಪ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಶ್ರೀನಿವಾಸ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಶ್ರೀನಿವಾಸ ಬಸ್​ನ ಚಾಲಕ ಸೇರಿ ಎರಡು ಬಸ್​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್​ಗಳ‌ ಮುಖಾಮುಖಿ‌ ಡಿಕ್ಕಿಯಿಂದ ಶಿವಮೊಗ್ಗ ಸಾಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕುಂಸಿ ಪೊಲೀಸ್ ಠಾಣೆಯ ಪಿಐ ತಿಪ್ಪೇಸ್ವಾಮಿ ಭೇಟಿ ನೀಡಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಅವರು ಮೆಗ್ಗಾನ್​ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!