November 2, 2026
Monday, November 2, 2026
spot_img

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಕಾರವಾರ:

ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟು ಇನ್ನೋರ್ವ ಸವಾರ ಮತ್ತು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಡಿಭಾಗದ ಕಾಳಿ ಸೇತುವೆಯ ಮೇಲೆ ಸಂಭವಿಸಿದೆ.

ಮೃತ ಬೈಕ್ ಸವಾರನನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿ ಅಶೋಕಕುಮಾರ್ ಎಂದು ಗುರುತಿಸಲಾಗಿದ್ದು ಗಾಯಗೊಂಡವರ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

ಅತಿಯಾದ ವೇಗದಲ್ಲಿ ಬೈಕುಗಳ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು ಚಿತ್ತಾಕುಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

Skip to toolbar