ಬಳ್ಳಾರಿಯಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬಳ್ಳಾರಿಯ ಕುರಗೋಡು ತಾಲೂಕಿನ ಬಸ್ ನಿಲ್ದಾಣದ ಬಳಿ ನಡೆದಿದೆ.

ಸರ್ಕಾರಿ ಬಸ್ ಬಳ್ಳಾರಿಗೆ ತೆರಳುತ್ತಿತ್ತು ಕುರುಗೋಡು ಡಿಪೋಗೆ ಸೇರಿದ ಕ 34 F-2016 ಸಂಖ್ಯೆಯ ಬಸ್ ತೆರಳುತ್ತಿತ್ತು. ಈ ವೇಳೆ ಏಕಾಏಕಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಸ್ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಆ ವೇಳೆಯಲ್ಲಿ ಕಂಬದಲ್ಲಿ ಕರೆಂಟ್ ಇಲ್ಲದಿರುವುದರಿಂದ ಪ್ರಯಾಣಿಕರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ. ಘಟನೆ ಕುರಿತಂತೆ ಕುರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!