SHOCKING VIDEO| ಗಾಳಿಯಲ್ಲಿ ಹಾರಿ ಪಲ್ಟಿ ಹೊಡೆದ ಬೈಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಸ್ತೆಯಲ್ಲಿ ಸಂಚರಿಸುವಾಗ ಅತ್ಯಂತ ಜಾಗರೂಕರಾಗಿರಿ, ಅತಿವೇಗವಾಗಿ ವಾಹನ ಚಲಾಯಿಸಬೇಡಿ ಎಂದು ಪೊಲೀಸರು ಹೇಳುತ್ತಲೇ ಇರುತ್ತಾರೆ. ಮಿತಿಮೀರಿದ ವೇಗ ಮತ್ತು ನಿರ್ಲಕ್ಷ್ಯದಿಂದ ಎಷ್ಟು ಗಂಭೀರ ಅಪಘಾತಗಳು ಸಂಭವಿಸುತ್ತಿವೆ ಎಂಬುದನ್ನು ಕಣ್ಣಾರೆ ನೋಡುತ್ತಿದ್ದೇವೆ. ಆದರೂ ಕೆಲ ವಾಹನ ಸವಾರರು ನಿರ್ಲಕ್ಷ್ಯ ತೋರಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಕೆಲವು ಪ್ರಕರಣಗಳಲ್ಲಿ ದುಡುಕಿನ ಚಾಲನೆಯಿಂದ ಅಮಾಯಕರು ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ. ಅದೇನೇ ಇರಲಿ.. ರಾಶ್ ಡ್ರೈವಿಂಗ್, ರಾಂಗ್ ರೂಟ್ ಡ್ರೈವಿಂಗ್ ಒಳ್ಳೆಯದಲ್ಲ. ಇತ್ತೀಚೆಗೆ ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರು ಚಾಲಕನ ನಿರ್ಲಕ್ಷ್ಯ ವ್ಯಕ್ತಿಯೊಬ್ಬನ ಪ್ರಾಣವನ್ನೇ ತೆಗೆದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಕೂಡಲೇ ಬೈಕ್ ಗಾಳಿಯಲ್ಲಿ ಹಾರಿ ಪಲ್ಟಿಯಾಗಿದೆ. ಅದೇ ವೇಗದಲ್ಲಿ ಹಿಂದೆ ಬರುತ್ತಿದ್ದ ಟೆಂಪೋ ಮೇಲೆ ಬೈಕ್ ಬಿದ್ದಿದೆ. ಈ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಅಜಾಗರೂಕತೆಯಿಂದ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡಿದ್ದು, ಗಂಭೀರ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗನ ಸ್ಥಿತಿ ಚಿಂತಾಜನಕವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!