ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾತ್ರಿಕರನ್ನು ಕರೆದೊಯ್ತುತ್ತಿದ್ದ ಪ್ರೈವೇಟ್ ಬಸ್‌ವೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯ ಬಡಗಾಂವ್ ಕಟ್ ಬಳಿಯ ಪೂರ್ವ ಪೆರಿಫೆರಡಲ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ನಡೆದ ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಅವರು ಕುಟುಂಬಗಳಿಗೆ ಕರೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 32 ಜನ ಇದ್ದರು. ರಾಜಸ್ಥಾನದಿಂದ ಬದೌನ್ ಕಡೆಗೆ ಬಸ್ ಪ್ರಯಾಣಿಸುತ್ತಿತ್ತು. ಅಪಘಾತದಲ್ಲಿ ಗಾಯಗಳಾಗಿ ಬದುಕುಳಿದ ಜನರೇ 112 ತುರ್ತು ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಅಪಘಾತದ ಸ್ಥಳಕ್ಕೆ ಆಂಬುಲೆನ್ಸ್, ಪೊಲೀಸ್ ಪ್ರತಿಕ್ರಿಯೆ ವಾಹನ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ತಕ್ಷಣವೇ ತಲುಪಿದ್ದು, ಉರುಳಿದ ಬಸ್‌ನಿಂದ ಗಾಯಗೊಂಡವರನ್ನು ರಕ್ಷಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಈವರೆಗೂ ಮೃತರ ಹೆಸರುಗಳು ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



