ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ.
ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು. ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.