ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರ್-ಲಾರಿ ನಡುವೆ ಡಿಕ್ಕಿಯಾಗಿದೆ.
ವೇಗವಾಗಿ ಬಂದ ಕಾರ್ ಲಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಬಾಂಡ ಪ್ರದೇಶದಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅತಿ ವೇಗವಾಗಿ ಕಾರ್ ಓಡಿಸುತ್ತಿದ್ದದ್ದೇ ಅಪಘಾತಕ್ಕೆ ಕಾರಣವಾಗಿದೆ, ಕಾರ್‌ನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದು, ಆರು ಮಂದಿ ಮೃತಪಟ್ಟಿದ್ದಾರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಿಲೌಸಾ ಗ್ರಾಮದ ನಿವಾಸ ಕಲ್ಲು ಎಂಬುವವರ 14 ವರ್ಷದ ಪುತ್ರನಿಗೆ ವಿದ್ಯುತ್ ಸ್ಪರ್ಶಿಸಿ ಅಸ್ತವ್ಯಸ್ತನಾಗಿದ್ದ. ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕಾರ್‌ನಲ್ಲಿ ಎಲ್ಲರೂ ತೆರಳಿದ್ದರು ಎನ್ನಲಾಗಿದೆ. 120-130 ಕಿ.ಮೀ ವೇಗದಲ್ಲಿ ಕಾರ್ ಚಾಲನೆ ಮಾಡುತ್ತಿದ್ದು, ಇದರಿಂದ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.