ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟೆಂಪೋ-ಡಂಪರ್ ಡಿಕ್ಕಿಯಾಗಿ 12 ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಶಹಜಾನ್‌ಪುರದಲ್ಲಿ ಡಂಪರ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ಡಂಪರ್ ಟೆಂಪೋಗೆ ಡಿಕ್ಕಿಯಾಗಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ದಟ್ಟ ಮಂಜಿನ ಕಾರಣ ಕಡಿಮೆ ಗೋಚರತೆ ಇತ್ತು ಎನ್ನಲಾಗಿದೆ.

ಮೃತರ ಬಗ್ಗೆ ಮಾಹಿತಿ ದೊರೆತಿಲ್ಲ. ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಮೃತರ ಕುಟುಂಬಗಳಿಗೆ ನೆರವು ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾಗಿ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!