ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ಕಡಮಲಕುಂಟೆ ಗ್ರಾಮದ ಬಳಿ ಬೊಲೆರೊ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೊಲೆರೊ ಬೈಕ್‌ಗೆ ಡಿಕ್ಕಿಯಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಈಶ್ವರ ಹಾಗೂ ಯಶ್ವಂತ್ ಪಾವಗಡದ ಶನಿ ಮಹಾತ್ಮ ದೇಗುಲಕ್ಕೆ ತೆರಳಿದ್ದರು. ವಾಪಾಸ್ ಬರುವಾಗ ಅಪಘಾತ ಸಂಭವಿಸಿದೆ. ಪಾವಗಡ ಠಾಣೆಯಲ್ಲಿ ದೂರು ದಾಖಲಾಗಿದೆ.