September 21, 2026
Monday, September 21, 2026
spot_img

ಬೆಂ-ಮೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬಸ್ ಡಿಕ್ಕಿ ರಭಸಕ್ಕೆ ರಸ್ತೆಯಲ್ಲೇ ಉರುಳಿದ ಕಂಟೇನರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಸಿಲಿಕಾನ್ ಸಿಟಿ ಬೆಂಗಳೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ಸೊಂದು, ಮುನ್ನಡೆಯುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಹೆದ್ದಾರಿಯಲ್ಲೇ ಕಂಟೇನರ್ ಪಲ್ಟಿಯಾಗಿದ್ದು, ಸಂಚಾರ ದಟ್ಟಣೆ ಉಂಟಾಗಿತ್ತು.

ರಾಮನಗರದ ವಡ್ಡರದೊಡ್ಡಿ ಬಳಿ ಘಟನೆ

ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಸೀಮೆಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಂಟೇನರ್ ಅನ್ನು ಹಿಂದಿಕ್ಕಲು (Overtake) ಬಸ್ ಚಾಲಕ ಯತ್ನಿಸಿದಾಗ ಈ ದುರಂತ ಸಂಭವಿಸಿದೆ. ಅತಿ ವೇಗದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬಸ್, ಲಾರಿಯ ಹಿಂಭಾಗಕ್ಕೆ ಅಪ್ಪಳಿಸಿದೆ. ಪರಿಣಾಮವಾಗಿ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಲಾರಿ ರಸ್ತೆಗೆ ಉರುಳಿದೆ.

ಪ್ರಯಾಣಿಕರು ಸುರಕ್ಷಿತ, ಪೊಲೀಸ್ ತನಿಖೆ

ಅಪಘಾತದ ತೀವ್ರತೆ ಹೆಚ್ಚಿದ್ದರೂ, ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಕೆಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸದ್ಯ ರಾಮನಗರ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !