Monday, January 12, 2026

ಮಂತ್ರಾಲಯದಿಂದ ವಾಪಸ್ ಬರುವಾಗ ಭೀಕರ ಅಪಘಾತ: ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಇನೋವಾ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ 35 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.

ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂತ್ರಾಲಯದಿಂದ ವಾಪಸ್ ಬರುವ ವೇಳೆ ಈ ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಇನೋವಾ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಂದಿನಿ (35) ಎನ್ನುವ ಮಹಿಳೆ ಸಾವನಪ್ಪಿದ್ದರೆ, ಕಾಲಿನಲ್ಲಿದ್ದ ಉಳಿದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!