Monday, September 26, 2022

Latest Posts

ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ: ಮುಗಿಲೆತ್ತರಕ್ಕೆ ಚಿಮ್ಮಿದ ಜ್ವಾಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚೀನಾದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹುನಾನ್ ಪ್ರಾಂತ್ಯದ ಮಧ್ಯ ಚೀನಾದ ಚಾಂಗ್ಶಾ ನಗರದ ಬೃಹತ್ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. 42 ಅಂತಸ್ತಿನ ಅತಿ ಎತ್ತರದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯಿಂದ ಹೊರಬಂದ ಹೊಗೆ ಮುಗಿಲೆತ್ತರಕ್ಕೆ ಮುಟ್ಟಿದೆ.

ಈ ಕಟ್ಟಡದಲ್ಲಿ ಸರ್ಕಾರಿ ಟೆಲಿಕಾಂ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಈ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಈ ಅವಘಡದಲ್ಲಿ ಕಟ್ಟಡದ ಬಹುತೇಕ ಎಲ್ಲಾ ಮಹಡಿಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!