November 16, 2026
Monday, November 16, 2026
spot_img

ಕಾರು-ಬೈಕ್ ನಡುವೆ ಭೀಕರ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ಕಾರವಾರ:

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕೋಡಿಭಾಗದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋಗಿದೆ. ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ.

ಮಾಜಾಳಿ ಕಡೆಯಿಂದ ಕಾರವಾರದತ್ತ ಬರುತ್ತಿದ್ದ ಬೈಕ್, ಗೋವಾ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ತೇಜಸ್ವಿ ಪವಾರ್ ಮೃತಪಟ್ಟಿದ್ದು, ಹಿಂಬದಿ ಸವಾರ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ದಾದಾಫೀರ್ ಸೇರಿದಂತೆ ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕಾರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

Skip to toolbar