ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ: ಮೃತಪಟ್ಟ ಐವರು ಕನ್ನಡಿಗರ ಗುರುತು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ಪತನಗೊಂಡಿದೆ. ಚಾಯ್ ಗ್ರಾಮದ ಸಮೀಪದ ಬೆಟ್ಟದ ಇಳಿಜಾರಿನಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದ್ದು, ಅದರಲ್ಲಿದ್ದ ಪೈಲಟ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ಐವರು ಪ್ರಯಾಣಿಕರು ಬೆಂಗಳೂರಿನವರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟ್ರಾನ್ಸ್ ಭಾರತ್ ಏವಿಯೇಷನ್‌ಗೆ ಸೇರಿದ VT-HCX ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್ ಮಧ್ಯಾಹ್ನ ಸುಮಾರು 1.14ಕ್ಕೆ ಬದರಿನಾಥದಿಂದ ಹಾರಾಟ ಆರಂಭಿಸಿತ್ತು. ಡೆಹ್ರಾಡೂನ್‌ನ ಸಹಸ್ತ್ರಧಾರಾ ಹೆಲಿಪ್ಯಾಡ್ ತಲುಪಬೇಕಿದ್ದ ವಿಮಾನವು ಜೋಶಿಮಠ … Continue reading ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ: ಮೃತಪಟ್ಟ ಐವರು ಕನ್ನಡಿಗರ ಗುರುತು ಪತ್ತೆ