ಕೊಡಗಿನಲ್ಲಿ ದಾರುಣ ಘಟನೆ: ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಕಾಡಾನೆಗಳು

ಹೊಸದಿಗಂತ ವರದಿ, ಮಡಿಕೇರಿ:
ವಿದ್ಯುತ್ ಸ್ಪರ್ಶಗೊಂಡು ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ನೆಲ್ಯಹುದಿಕೇರಿ ಗ್ರಾಮದ ಕೋಣೇರಿರ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಈ ದುರ್ಘಟನೆ ನಡೆದಿದ್ದು, ಒಂದು ಗಂಡು ಹಾಗೂ ಒಂದು ಹೆಣ್ಣಾನೆ ಸ್ಥಳದಲ್ಲೇ ಮೃತಪಟ್ಟಿವೆ.
ತೋಟದ ನಡುವೆ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿದ್ದು, ತಂತಿ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಜಾರಿದೆ. ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ವಿದ್ಯುತ್ ಈ ತಂತಿ ಸ್ಪರ್ಶಿಸಿದ್ದು, ಎರಡು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಸ್ಥಳಕ್ಕೆ ಅರಣ್ಯ‌ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!