ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರದಲ್ಲಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ರೋಹಿತ್ ಸುಭಾಷ್ ಪವಾರ್(22) ಕೊಲೆಯಾದವನು. ರೋಹಿತ್ ನನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ಮುಳ್ಳುಕಂಟಿಯಲ್ಲಿ ಬಿಸಾಕಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಬಿಯರ್ ಬಾಟಲಿ, ಚಿಪ್ಸ್ ಪ್ಯಾಕೆಟ್ ಗಳು ಪತ್ತೆಯಾಗಿವೆ. ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರೋಹಿತ್ ಕೊಲೆಯಾಗಿರುವ ಬಗ್ಗೆ ಸ್ನೇಹಿತ ಖಾಲಿದ್ ರಾತ್ರಿ 2.21ಕ್ಕೆ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಮಗನ ಕೊಲೆಯ ಬಗ್ಗೆ ಪೋಷಕರು ಎಪಿಎಂಸಿ ಠಾಣೆ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ ಎಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.