CRIME| ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ

ಹೊಸದಿಗಂತ ವರದಿ ಕಲಬುರಗಿ:

ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಜೇವಗಿ೯ ತಾಲೂಕಿನ ಕುಕನೂರ್ ಗ್ರಾಮದಲ್ಲಿ ನಡೆದಿದೆ.

ಗುರುಬಸಮ್ಮಾ ಹುಚ್ಚಡ (65) ಕೊಲೆಯಾದ ಮಹಿಳೆಯಾಗಿದ್ದು, ಕುಕನೂರ್ ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಜಮೀನಿಗೆ ತೆರಳಿದ್ದ ಗುರುಬಸಮ್ಮ ಸಂಜೆಯಾದರೂ, ವಾಪಸ್ ಮನೆಗೆ ಬಂದಿರಲಿಲ್ಲ. ಕೊಲೆ ಮಾಡಿ ದುಷ್ಕರ್ಮಿಗಳು ಜಮೀನಿನಲ್ಲೆ ಅರೆ ಬರೆಯಾಗಿ ಶವವನ್ನು ಹೂತಿಟ್ಟಿದ್ದರು.

ಸಂಜೆ ವೇಳೆಗೆ ಜಮೀನಿಗೆ ತೆರಳಿದಾಗ ಗುರುಬಸಮ್ಮಾ ಕೊಲೆಯಾಗಿ ಬಿದ್ದಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!