November 17, 2026
Tuesday, November 17, 2026
spot_img

ರಷ್ಯಾದಲ್ಲಿ ಭೀಕರ ವಿಮಾನ ದುರಂತ: ಸ್ಫೋಟಗೊಂಡ ಮಿಲಿಟರಿ ಏರ್ ಕ್ರಾಫ್ಟ್, 17 ಮಂದಿ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಷ್ಯಾದ ಸೈಬೀರಿಯಾ ಪ್ರದೇಶದ ಕೆಮೆರೊವೊದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, ಮಿಲಿಟರಿ ವಿಮಾನವೊಂದು ಪತನಗೊಂಡ ಪರಿಣಾಮ ಅದರಲ್ಲಿದ್ದ 17 ಮಂದಿ ಮೃತಪಟ್ಟಿದ್ದಾರೆ. ಯಾಗುನೊವೊ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪತನಗೊಂಡ ವಿಮಾನವು ರಷ್ಯಾದ ಮಿಲಿಟರಿಗೆ ಸೇರಿದ ಆನ್-12 (An-12) ಮಾದರಿಯ ವಿಮಾನ ಎನ್ನಲಾಗಿದೆ. ವಿಮಾನದಲ್ಲಿದ್ದ ಎಲ್ಲ 17 ಮಂದಿ ಮೃತಪಟ್ಟಿದ್ದಾರೆ ಎಂದು ರಷ್ಯಾದ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆಯೊಂದು ವರದಿ ಮಾಡಿದೆ.

ಬೆಂಕಿ ಹೊತ್ತಿಕೊಂಡು ನೆಲಕ್ಕೆ ಅಪ್ಪಳಿಸಿದ ವಿಮಾನ

ಪ್ರತ್ಯಕ್ಷದರ್ಶಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ವಿಮಾನವು ಹಾರಾಟದ ವೇಳೆ ಬೆಂಕಿಗೆ ಆಹುತಿಯಾಗಿತ್ತು. ಬಳಿಕ ಏಕಾಏಕಿ ಕೆಳಮುಖವಾಗಿ ಕುಸಿದು ನೆಲಕ್ಕೆ ಅಪ್ಪಳಿಸಿದ ನಂತರ ಭಾರೀ ಸ್ಫೋಟ ಸಂಭವಿಸಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ:

ಘಟನೆ ಕುರಿತು ಕೆಮೆರೊವೊ ಪ್ರಾಂತ್ಯದ ಗವರ್ನರ್ ಇಲ್ಯಾ ಸೆರೆದ್ಯುಕ್ ಟೆಲಿಗ್ರಾಂ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಬಳಿಕ ವಿಡಿಯೋ ಸಂದೇಶದಲ್ಲಿ ಮಾತನಾಡಿದ ಗವರ್ನರ್, ಪತನಗೊಂಡ ವಿಮಾನವು ಈ ಪ್ರದೇಶದ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ತನಿಖೆ ಆರಂಭ

ವಿಮಾನ ಪತನಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ. ರಷ್ಯಾದ ರಕ್ಷಣಾ ಸಚಿವಾಲಯ ಈವರೆಗೆ ದುರಂತದ ಕುರಿತು ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Must Read

Skip to toolbar