ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 3 ಕೋಬ್ರಾ ಸಿಬ್ಬಂದಿ ಸೇರಿ 4 ಜನರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯ್‌ಪುರ ಸಮೀಪದ ಧಮ್ತಾರಿ ಜಿಲ್ಲೆಯ ಖಾಪ್ರಿ ಬೈಪಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 3 ಕೋಬ್ರಾ ಪಡೆಯ ಸಿಬ್ಬಂದಿ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಜಗದಲ್ಪುರದಿಂದ ರಾಯ್‌ಪುರದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾರುತಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 3 ಕೋಬ್ರಾ ಸಿಬ್ಬಂದಿ ಸೇರಿ 4 ಜನರ ದುರ್ಮರಣ