August 29, 2026
Saturday, August 29, 2026
spot_img

ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಪ್ರಾಣ ಬಿಟ್ಟ ಅಂಚೆ ನೌಕರ

ಹೊಸದಿಗಂತ ವರದಿ ತುಮಕೂರು:

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದರಾಜು ವಿ, ಕೆ, (53) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದು, ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿಯ ವಳಗೆರೆಪುರ ಗ್ರಾಮದವರಾಗಿದ್ದಾರೆ.

ಇದನ್ನೂ ಓದಿ:

ಇವರು ವಳಗೆರೆಪುರ ಬ್ರಾಂಚ್ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಸೋಮವಾರ ಕೆಲಸ ಮುಗಿಸಿಕೊಂಡು ಕಾರ್ಯನಿಮಿತ್ತ ದ್ವಿಚಕ್ರವಾಹನದಲ್ಲಿ ಕುಣಿಗಲ್ಗೆ ಬರುತ್ತಿದ್ದಾಗ ಬಿಳಿ ದೇವಾಲಯದ ಬಳಿ ಹಿಂಬದಿಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಾಗ ದ್ವಿಚಕ್ರ ವಾಹನ ರಸ್ತೆ ಬದಿ ಇದ್ದ ಮರಕ್ಕೆ ಗುದ್ಧಿ ತೀವ್ರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಮಂಗಳವಾರ ಬೆಳಿಗ್ಗೆ ಮೃತರ ಸ್ವ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !