February 18, 2026
Wednesday, February 18, 2026
spot_img

ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ | ಟಿಪ್ಪರ್ ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

ಹೊಸದಿಗಂತ ವರದಿ ಮಂಡ್ಯ:

ಟಿಪ್ಪರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನಪ್ಪಿ, ಮತ್ತೊಬ್ಬರು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕು ಅಂಚೆ ಭುವನಹಳ್ಳಿ ಬಳಿಯ ಪಟ್ಟಲಮ್ಮ ದೇವಸ್ಥಾನದ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಓರ್ವ ಮಹಿಳೆ ಮತ್ತು ಕಾರು ಚಾಲಕ ಹೆಸರು ತಿಳಿದು ಬಂದಿಲ್ಲ ಇವರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ನಾಗಮಂಗಲ ಮಾರ್ಗವಾಗಿ ಮೇಲುಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ನಾಗಮಂಗಲ ಕಡೆಯಿಂದ ತೆರಳುತ್ತಿದ್ದ ಟಿಪ್ಪರ್ ತಿರುವಿನಲ್ಲಿ ಕಾರಿಗೆ ಅಪ್ಪಳಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತಿಬ್ಬರು ಕೇವಲವಾಗಿ ಗಾಯಗೊಂಡಿದ್ದು ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !