SHOCKING | ಬೀದರ್ ಬೆನ್ನಲ್ಲೇ ಮಂಗಳೂರು ಬ್ಯಾಂಕ್‌ನಲ್ಲಿ ಭಯಾನಕ ದರೋಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೀದರ್‌ನಲ್ಲಿ 93 ಲಕ್ಷ ರೂಪಾಯಿ ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಆಗಿದೆ. ಕಾರಿನಲ್ಲಿಬಂದ ಆಗಂತುಕರು ಚಿನ್ನ, ಒಡವೆ, ಹಣವನ್ನೆಲ್ಲಾ ಕದ್ದು ಪರಾರಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್‌ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಆಗಂತುಕರು ಬ್ಯಾಂಕ್‌ಗೆ ನುಗ್ಗಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನೂ ಕಳವು ಮಾಡಿದ್ದಾರೆ ಎನ್ನಲಾಗಿದೆ.

ಕೆ.ಸಿ ರೋಡ್‌ ಕೋಟೆಕಾರು ಬ್ಯಾಂಕ್ ಶಾಖೆಯಿಂದ ಭಾರೀ ದರೋಡೆ ಮಾಡಲಾಗಿದೆ. 5 ಮಂದಿ ಆಗಂತುಕರು ಫಿಯೇಟ್ ಕಾರಿನಲ್ಲಿ ಬಂದಿದ್ದರು. ಮಾರಕಾಸ್ತ್ರ ತೋರಿಸಿ ದರೋಡೆ ನಡೆಸಿದ ತಂಡ ಮಂಗಳೂರಿನ ಕಡೆಗೆ ಪರಾರಿಯಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸ್‌ ತಂಡ ಆಗಂತುಕರಿಗಾಗಿ ಬಲೆ ಬೀಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!