May 17, 2026
Sunday, May 17, 2026
spot_img

ಹೊಸಪೇಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: ಇಬ್ಬರು ಬಲಿ, 21 ಮಂದಿಗೆ ಗಾಯ

ಹೊಸದಿಗಂತ ವಿಜಯನಗರ:

ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆ ಪರಿಣಾಮ ಬೈಕ್ ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 21 ಮಂದಿ ಗಾಯಗೊಂಡ ಘಟನೆ ಹೊಸಪೇಟೆ ತಾಲೂಕಿನ ಡಾಣಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಭವಿಸಿದೆ.

ಘಟನೆಯಲ್ಕಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಸಾರಿಗೆ ಬಸ್ ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸೇರಿ 21 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳ ಪೈಕಿ 15 ಜನರನ್ನು ಹೊಸಪೇಟೆ ವಿಭಾಗೀಯ ಆಸ್ಪತ್ರೆಗೆ, ಒಬ್ಬರನ್ನು ಖಾಸಗಿ ಆಸ್ಪತ್ರೆ ಹಾಗೂ ನಾಲ್ವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಳ್ಳುಳ್ಳಿ ತುಂಬಿದ್ದ ಲಾರಿ ಹೊಸಪೇಟೆ, ಚಿತ್ರದುರ್ಗ ಮಾರ್ಗವಾಗಿ ಚಿತ್ರದುರ್ಗಕ್ಕೆ‌ ಸಾಗುತ್ತಿತ್ತು. ಈ ವೇಳೆ ಬಿಎಂಎಂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಬೈಕ್, ಕಾರು‌, ಹೊಸಪೇಟೆಯಿಂದ ಚಿರ್ತದುರ್ಗಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಹಾಗೂ ಮತ್ತೊಂದು ಬೈಕ್ ಡಿಕ್ಕಿ ಹೊಡೆದು‌ ಸರಣಿ ಅಪಘಾತ ಸಂಭವಿಸಿದೆ.

ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !