October 17, 2026
Saturday, October 17, 2026
spot_img

ರಾಮನಗರದಲ್ಲಿ ಭೀಕರ ಸರಣಿ ಅಪಘಾತ: ಓರ್ವ ಮೃತ್ಯು, ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರದ ತೀನೈಘಾಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.

ಜೊಯಿಡಾ ತಾಲೂಕಿನ ರಾಮನಗರ ಗೋವಾ ಸಂಪರ್ಕಿಸುವ ತೀನೈಘಾಟ್ ಇದಾಗಿದೆ. ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಟೆಂಪೋ ಚಾಲಕ ಸಾವನ್ನಪ್ಪಿದ್ದು. ಖಾಸಗಿ ಬಸ್ಸಲ್ಲಿದ್ದ ನಾಲ್ವರು ಪ್ರಯಾಣಿಕರು ಹಾಗೂ ಬೈಕ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ರಾಮನಗರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಗಿದೆ.

Must Read