ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಟೇನರ್ ಟ್ರೇಲರ್ ಟ್ರಕ್ 20 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲೆಯ ಖಲಾಪುರ ತಾಲೂಕಿನ ಖೋಪೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅದೋಶಿ ಸುರಂಗದ ಬಳಿ ಬ್ರೇಕ್ ವೈಫಲ್ಯದ ಪರಿಣಾಮ ಕಂಟೇನರ್ ಟ್ರೇಲರ್ ಟ್ರಕ್‌ನ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯು ಮತ್ತು ಮರ್ಸಿಡಿಸ್‌ನಂತಹ ಐಷಾರಾಮಿ ಕಾರುಗಳು ಸೇರಿದಂತೆ ಕನಿಷ್ಠ 20 ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮವಾಗಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ .
ಗಾಯಾಳುಗಳನ್ನು ನವಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.
ಇವರಲ್ಲಿ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಚಿಕಿತ್ಸೆ ಪಡೆಯುತ್ತಿರುವಾಗ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.