Monday, October 2, 2023

Latest Posts

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ: ಸಾವಿನ ಸಂಖ್ಯೆ 238ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.

900 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲು ಅಪಘಾತದಲ್ಲಿ ಮೃತಪಟ್ಟವರಿಗಾಗಿ ಒಡಿಶಾ ಸರ್ಕಾರ ಒಂದು ದಿನದ ಶೋಕಾಚರಣೆ ಘೋಷಿಸಿದ್ದು, ಇಂದು ಒಡಿಶಾದಲ್ಲಿ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ.

ಘಟನಾ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲು ಮಾರ್ಗಗಳಿವೆ, ಮೂರು ರೈಲುಗಳ ನಡುವೆ ಅಪಘಾತವಾಗಿದ್ದು, ದೇಶವೇ ಬೆಚ್ಚಿಬಿದ್ದಿದೆ.

https://twitter.com/ANI/status/1664799948712583168?s=20

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!