Tuesday, November 25, 2025

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ರಿಂದ ಶುರುವಾಗಿದೆ ಕುದುರೆ ವ್ಯಾಪಾರ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಕರ್ನಾಟಕದ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಕಳೆದು 1 ವರ್ಷದಿಂದಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ ಇದೊಂದು ಲಫಂಗ ಸರ್ಕಾರ 2013ರಲ್ಲಿ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕಾಣುತ್ತಿಲ್ಲ.ಇವಾಗ ಇರೋದು ಭ್ರಷ್ಟಾಚಾರದ ಸಿದ್ದರಾಮಯ್ಯ ಎಂದರು.

ಕಾಂಗ್ರೆಸ್ನವರು ನವೆಂಬರ್ ಕ್ರಾಂತಿ ಮತ್ತು ಬ್ರಾಂತಿಯಲ್ಲಿ ಮುಳುಗಿದ್ದಾರೆ. ಇವರಿಗೆ ಅಧಿಕಾರದ ಮದ ಏರಿದೆ ಒಂದು ದಿನ ಈ ಒಂದು ಮದ ಇಳಿಯಲೇಬೇಕು. ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕು ಎಂಬು ಉದ್ದೇಶ ಇಲ್ಲ ಕಾಂಗ್ರೆಸ್ ಒಡೆದು ಹೋಗಿದೆ ಇದೊಂದು ದಿಕ್ಕು ಇಲ್ಲದ ಸರ್ಕಾರ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

error: Content is protected !!