Thursday, August 11, 2022

Latest Posts

‘ಹೊಸ ದಿಗಂತ’ ಮಂಗಳೂರು ಪ್ರಧಾನ ಕಚೇರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್  

ದಕ್ಷಿಣ ಕನ್ನಡ ಜಿಲ್ಲೆಗೆ ಬುಧವಾರ ಆಗಮಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರಲ್ಲದೆ ಮಂಗಳೂರಿನಲ್ಲಿರುವ ‘ಹೊಸ ದಿಗಂತ’ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಪತ್ರಿಕೆಯ ಸಂಪಾದಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್.ಪ್ರಕಾಶ್ ಅವರು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಸಚಿವರ ಜೊತೆಗಿದ್ದರು.
ಪತ್ರಿಕೆಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ, ಸಹ ಸಂಪಾದಕ ದಿನಕರ ಇಂದಾಜೆ, ಪ್ರಸರಣ ವಿಭಾಗದ ಮುಖ್ಯಸ್ಥ ಪ್ರಶಾಂತ್ ಮಾಣೈ ಸೇರಿದಂತೆ ಪತ್ರಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss