ಡಾ.ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಬಾಳೇಪುಣಿಯವರಿಗೆ `ಹೊಸ ದಿಗಂತ’ದಿಂದ ಗೌರವ

ಹೊಸದಿಗಂತ ವರದಿ ಮಂಗಳೂರು:

ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ `ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಪಾತ್ರರಾದ `ಹೊಸ ದಿಗಂತ’ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರನ್ನು ಮಂಗಳವಾರ ಮಂಗಳೂರಿನ `ಹೊಸ ದಿಗಂತ’ ಕಚೇರಿಯಲ್ಲಿ ಗೌರವಿಸಲಾಯಿತು.
`ಹೊಸ ದಿಗಂತ’ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ.ಎಸ್ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಬಾಳೇಪುಣಿಯವರನ್ನು ಗೌರವಿಸಿದರು. ಈ ಸಂದರ್ಭ ಸ್ಥಾನೀಯ ಸಂಪಾದಕರಾದ ಪ್ರಕಾಶ್ ಇಳಂತಿಲ, ಸಹಸಂಪಾದಕ ದಿನಕರ ಇಂದಾಜೆ ಉಪಸ್ಥಿತರಿದ್ದರು.
ಇತ್ತೀಚೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಯು 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಸುತ್ತಿರುವ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು 36 ವರ್ಷಗಳ ಅನುಭವ ಹೊಂದಿದ್ದಾರೆ.
ಬಾಳೇಪುಣಿ ಅವರಿಗೆ ಈ ಹಿಂದೆ 2011ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, 2004ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, 2014ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2012ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!