ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಒಮಿಕ್ರಾನ್ ಭೀತಿ ನಡುವೆ ಕೋವಿಡ್ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವ 5ವರ್ಷದೊಳಗಿನ ಮಕ್ಕಳ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.
5 ವರ್ಷದೊಳಗಿನ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹರಿಲ್ಲದ ಕಾರಣ ಸೋಂಕು ಹೆಚ್ಚಾಗುತ್ತಿದೆ ಎನ್ನಲಾಗಿದೆ. ಅಮೆರಿಕದಲ್ಲಿ ಡಿಸೆಂಬರ್ ನಿಂದ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ಈ ವೇಳೆ ಲಕ್ಷ ಮಕ್ಕಳಲ್ಲಿ ಶೇ.2.5ರಷ್ಟು ಮಕ್ಕಳು ಕೋವಿಡ್ ಗೆ ತುತ್ತಾಗಿದ್ದಾರೆ.
ದೇಶದ 14 ರಾಜ್ಯಗಳಲ್ಲಿ 250 ಆಸ್ಪತ್ರೆಗಳಲ್ಲಿ 5-17 ವರ್ಷದ ಮಕ್ಕಳು ಚಿಕಿತ್ಸೆಗೆ ದಾಖಲಾಗಿದ್ದಾರೆ. ಮೊದಲೆರಡು ಕೋವಿಡ್ ಅಲೆಗಳಿಗಿಂತ ಪ್ರಸ್ತುತ ಸಾಲಿನಲ್ಲಿ ಹೆಚ್ಚಿನ ಮಕ್ಕಳು ಸೋಂಕಿಗೆ ಗುರಿಯಾಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.
12-18 ವರ್ಷದ ಮಕ್ಕಳ ಪೈಕಿ ಕೇವಲ 50ರಷ್ಟು ಮಕ್ಕಳು ಮಾತ್ರ ಸಂಪೂರ್ಣ ಲಸಿಕೆ ಪಡೆದಿದ್ದಾರೆ.