ನೀರಿಗೆ ತತ್ತರಿಸಿರುವ ಬೆಂಗಳೂರಿಗೆ ಉರಿ ಬಿಸಿಲಿನ ಶಾಕ್: ಗೈಡ್‌ಲೈನ್ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದೆಡೆ ನೀರಿನ ಅಭಾವದಿಂದ ತತ್ತರಿಸಿರುವ ಸಿಲಿಕಾನ್ ಸಿಟಿ ಬೆಂಗಳೂರು ಈಗ ಬಿಸಿಲಿನ ಝಳಕ್ಕೆ ಹೈರಾಣಾಗಿದೆ.

ಸುಡುಬಿಸಿಲು ಹಲವು ಆರೋಗ್ಯ ಸಂಬಂಧಿಸಿ ಸಮಸ್ಯೆಗಳಿಗೆ ಕಾರಣವಾಗುತ್ತಿರುವುದನ್ನು ಮನಗಂಡ ಆರೋಗ್ಯ ಇಲಾಖೆ ಈಗ ಬೆಂಗಳೂರು ವಾಸಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

  • ವಿಶೇಷವಾಗಿ ಬೆಳಗ್ಗೆ 11 ರಿಂದ ಸಂಜೆ 4ರ ವರೆಗೆ ಎಚ್ಚರವಹಿಸುವಂತೆ ಇಲಾಖೆ ತಿಳಿಸಿದ್ದು, ಈ ಅವಧಿಯಲ್ಲಿ ಬಿಸಿಲಿಗೆ ಮೈಯೊಡ್ಡದಂತೆ ಕಿವಿಮಾತು ಹೇಳಿದೆ.
  • ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ಬಿಸಿಲಿಗೆ ಮೈ ಒಡ್ಡಬಾರದು.
  • ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಾದರೆ ಗಂಭೀರ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಹೀಟ್ ಸ್ಟ್ರೋಕ್ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!